
ದುಬೈ: ಐಸಿಸಿ (ICC) ಟೆಸ್ಟ್ ಬ್ಯಾಟಿಂಗ್ ರ್‍ಯಾಂಕಿಂಗ್ ಪ್ರಕಟವಾಗಿದ್ದು, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಮತ್ತು ವಿರಾಟ್ ಕೊಹ್ಲಿ ಟಾಪ್ 10 ರಲ್ಲಿ ಕಾಣಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ 2ನೇ ಸ್ಥಾನಕ್ಕಿಳಿದ, ಜೈಸ್ವಾಲ್ 1ನೇ ಸ್ಥಾನಕ್ಕೆ ಜಿಗಿತ ಕಂಡಿದ್ದರೆ, ರೋಹಿತ್ 6ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ರೋಹಿತ್, ಜೈಸ್ವಾಲ್, ಕೊಹ್ಲಿ ಕ್ರಮವಾಗಿ 6, 7, 8ನೇ ಸ್ಥಾನ ಪಡೆದಿರುವುದು ವಿಶೇಷ. ರ್‍ಯಾಂಕಿಂಗ್‌ನ ಅಗ್ರ 5 ಸ್ಥಾನಗಳಲ್ಲಿ ಕ್ರಮವಾಗಿ ಇಂಗ್ಲೆಂಡ್‌ನ ಜೋ ರೂಟ್, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸ್, ಡೇರಿಲ್ ವಿಚೆಲ್, ಇಂಗ್ಲೆಂಡ್‌ನ ಬ್ರೂಕ್ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಇದ್ದಾರೆ. ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಭಾರತದ ಆರ್.ಅಶ್ವಿನ್ ನಂಬರ್ 01 ಸ್ಥಾನದಲ್ಲೇ ಮುಂದುವರಿದಿದ್ದಾರೆ ಎಂದು ವರದಿಯಾಗಿದೆ.
Poll (Public Option)

Post a comment
Log in to write reviews