
ರಾಜ್ಯದಲ್ಲಿ ಜೆ.ಡಿ.ಎಸ್ ಬಿಜೆಪಿ ಮೈತ್ರಿ ಮುಂದುವರೆಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ. ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದುವರಿಯುತ್ತದೆ. ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.
ನರೇಂದ್ರ ಮೋದಿಯವರು 400 ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತನೆ ನಡೆಸಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್ನವರು ಏನೇ ಹೇಳಿದ್ರು ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ. ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಿರಬಹುದು. ಆದ್ರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು.
Poll (Public Option)

Post a comment
Log in to write reviews