
ಬೆಂಗಳೂರು: ಈಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ. ಸಂಬಂಧ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ವಿಪಕ್ಷ ಒತ್ತಾಯದ ಮೆರಗೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಬಹಿರಂಗ ಸಭೆಗಳಲ್ಲಿ ಮಾತನಾಡಿ, ಪ್ರಜ್ವಲ್ ರೇವಣ್ಣರಿಂದ 400 ಮಹಿಳೆಯರ ಮೇಲೆ ಮಾಸ್ ರೇಪ್ ಆಗಿದೆ ಎಂದು ಹೇಳಿದ್ದರು. ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಸ್ಐಟಿ ಅವರಿಗೆ ಸಮನ್ಸ್ ನೀಡಬೇಕು ಎಂದು ಜೆಡಿಎಸ್ ಪಕ್ಷ ಒತ್ತಾಯ ಮಾಡಿ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಲಾಗಿದೆ.
Poll (Public Option)

Post a comment
Log in to write reviews