2024-12-24 06:17:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ಬಗ್ಗೆ ಜೆಡಿಎಸ್ ವ್ಯಂಗ್ಯ

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ಅವರ ವಿರುದ್ಧ ವಾಗ್ದಾಳಿ ಆರಂಭಿಸಿವೆ. ಒಂದೆಡೆ ವಿಕಪ್ಷ ನಾಯಕರು ಸಿಎಂಗೆ ರಾಜೀನಾಮೆಗೆ ಆಗ್ರಹಿಸಿದ್ದಾರೆ, ಮತ್ತೊಂದು ಸಿಎಂ ಸರಣಿ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ಮಧ್ಯೆ ಜೆಡಿಎಸ್ ಟ್ವೀಟ್ ಮೂಲಕ ಕುಹಕವಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್ ಕಪ್ಪು ಚುಕ್ಕೆಯಿಂದ ಬೆತ್ತಲಾದ “ವೈಟ್ನರ್ ರಾಮಯ್ಯ” ಎಂದು ಉಲ್ಲೇಖಿಸಿದೆ.

ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕೆ ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ’ ಎಂದು ಜೆಡಿಎಸ್ ಆಗ್ರಹಿಸಿದೆ. ಮುಡಾ ಹಗರಣ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಸಿಎಂ ವಿರುದ್ಧದ ಆರೋಪಗಳ ತನಿಖೆ ಅಗತ್ಯ ಎಂದಿದೆ. ಸಿಎಂ ಪತ್ನಿಯೇ ಫಲಾನುಭವಿಯಾಗಿರುವುದರಿಂದ ತನಿಖೆ ಅಗತ್ಯ ಎಂದು ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

Post a comment

No Reviews