
ಬೆಂಗಳೂರು: ರಾಜ್ಯದ ಜನರ ಸಮಸ್ಯೆಗೆ ಪರಿಹಾರ ಸಿಗಬೇಕೆ ಹೊರತು ರಾಜಕೀಯವಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕೇಂದ್ರ ಸಚಿವರಾದ ನಂತರ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಸಾದರಹಳ್ಳಿ ಗೇಟ್ ಬಳಿ ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಕೃಷಿ ಸಚಿವರಾಗಿ ಕೆಲಸ ಮಾಡಬೇಕೆಂಬ ಆಸೆ ಇತ್ತು. ಆದರೆ ನರೇಂದ್ರಮೋದಿ ಅವರು ಎರಡು ದೊಡ್ಡ ಖಾತೆಗಳ ಜವಾಬ್ದಾರಿಯನ್ನು ನೀಡಿದ್ದಾರೆ. ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇನೆ. ಎಲ್ಲ ಇಲಾಖೆಯಲ್ಲಿ ನಮ್ಮ ರಾಜ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ಮಾಡುವುದಾಗಿ ಹೇಳಿದರು.
ಲೋಕಸಭೆ ಚುನಾವಣೆ ಸಮಯದಲ್ಲಿ ರಾಜ್ಯ ರಾಜಕಾರಣ ಯಾವ ರೀತಿ ನಡೆಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ರೈತರ ಕೃಷಿಗೆ ತೊಂದರೆಯಾಗದಂತೆ ಕಾರ್ಖಾನೆಗಳು ಕೆಲಸ ಮಾಡುವಂತೆ ಮಾಡುತ್ತೇನೆ ಎಂದರು.
ಕೇಂದ್ರ ಸಚಿವರಾದ ಬಳಿಕ ರಾಜ್ಯಕ್ಕೆ ಬಂದ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಮತ್ತು ವಿಶೇಷವಾಗಿ ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಮತದಾರಾರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
Poll (Public Option)

Post a comment
Log in to write reviews