
ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಜುಲೈ 6ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ 20ಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ. ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿ.ಫಾರ್ಮ, ಬಿ.ಫಾರ್ಮ, ಡಿಪ್ಲೋಮಾ, ಬಿಇ, ಬಿ.ಟೆಕ್ ಹಾಗೂ ಪದವಿ, ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಸಕ್ತ ಅಭ್ಯರ್ಥಿಗಳು ಕನಿಷ್ಠ 15 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್‌ನೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 8105122556, 9591088202 ನಂಬರ್‌ಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ ಡಿ ತಿಳಿಸಿದ್ದಾರೆ.
Poll (Public Option)

Post a comment
Log in to write reviews