ಟಾಪ್ 10 ನ್ಯೂಸ್
ಕಾಳಿ ನದಿ ಸೇತುವೆ ಕುಸಿತ: ಉತ್ತರಕನ್ನಡ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಮೈಸೂರು: ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು (Kali Bridge Collapse) ಬಿದ್ದಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅವರಿಗೆ ಕರೆ ಮಾಡಿ ಬುಧವಾರ (ಆಗಸ್ಟ್ 07) ಮಾಹಿತಿ ಪಡೆದರು.
ಜಿಲ್ಲೆಯಲ್ಲಿ ಎಲ್ಲ ಸೇತುವೆಗಳು, ರಸ್ತೆಗಳ ಸುರಕ್ಷತೆಯ ಕುರಿತು ಖಾತರಿಪಡಿಸುವಂತೆ ಹಾಗೂ ಯಾವುದೇ ಜೀವಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.
ಘಟನೆಯ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಸೇತುವೆ ಕುಸಿದ ಸಂದರ್ಭದಲ್ಲಿ ಗಾಯಗೊಂಡ ಲಾರಿ ಚಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಕಾರ್ಯಚರಣೆಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಸೇತುವೆಯ ಪರಿಶೀಲನೆಗಾಗಿ ಮತ್ತು ಪ್ರದೇಶದಲ್ಲಿನ ಎಲ್ಲಾ ಸೇತುವೆಗಳ ಸುರಕ್ಷತೆಯನ್ನು ಖಚಿತಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (NHAI) ಅಧಿಕೃತ ಪತ್ರವನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.
Poll (Public Option)

Post a comment
Log in to write reviews