2024-12-24 05:52:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ : ಜೂ.27ರಂದು ಸಿನಿಮಾ ರಿಲೀಸ್

ಬೆಂಗಳೂರು: ವೈಜ್ಞಾನಿಕ ಮತ್ತು ಕಾಲ್ಪನಿಕ ಸಮ್ಮಿಶ್ರಣದ ದೃಶ್ಯಕಾವ್ಯ ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ. ಮೊದಲ ನೋಟವು ಭಾರತೀಯ ಪುರಾಣಗಳಲ್ಲಿ ಬೇರೂರಿರುವ ಅಸಾಧಾರಣ ‘ಕಲ್ಕಿ 2898 AD’ ಸಿನಿಮೀಯ ಬ್ರಹ್ಮಾಂಡವನ್ನು ಪ್ರೇಕ್ಷಕರಿಗೆ ಪರಿಚಯಿಸಿದರೆ, ಇದೀಗ ಬಿಡುಗಡೆ ಆಗಿರುವ ಟ್ರೇಲರ್ ಚಿತ್ರದೊಳಗಿನ ಇನ್ನಷ್ಟ ಆಳವನ್ನು ನೋಡುಗನಿಗೆ ಪರಿಚಯಿಸಿದೆ. ಇದು ಮಹಾಕಾವ್ಯದ ಇನ್ನೊಂದು ಹಂತದ ಬಗ್ಗೆ ಸುಳಿವು ನೀಡುತ್ತದೆ.
ಟ್ರೈಲರ್‌ನಲ್ಲಿ ಒಂದಕ್ಕಿಂತ ಒಂದು ಮೀರಿಸುವ ಪಾತ್ರಗಳೇ ಹೈಲೈಟ್.‌ ಮೆಗಾಸ್ಟಾರ್ ಅಮಿತಾಬ್‌ಚ್ಚನ್ ‘ಅಶ್ವತ್ಥಾಮ’ ಆಗಿ ಧೈರ್ಯಶಾಲಿ ಸಾಹಸಗಳನ್ನು ಪ್ರದರ್ಶಿಸುತ್ತಾರೆ. ಉಳಗನಾಯಗನ್ ಕಮಲ್ ಹಾಸನ್ ಗುರುತಿಸಲಾಗದ ಇನ್ನೂ ಮಾರಣಾಂತಿಕ ಅವತಾರದಲ್ಲಿ ‘ಯಾಸ್ಕಿನ್’ ಆಗಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಭೈರವನಾಗಿ, ದೀಪಿಕಾ ಪಡುಕೋಣೆ ‘ಸುಮತಿ’ ಪಾತ್ರದಲ್ಲಿ ಕಾನಿಸಿಕೊಂಡಿದ್ದಾರೆ. ದಿಶಾ ಪಟಾನಿ ‘ರಾಕ್ಸಿ’ಖಡಕ್‌ ಆಗಿಯೇ ಮಿಂಚು ಹರಿಸಿದ್ದಾರೆ.
ಕಲ್ಕಿ 2898 AD ಚಿತ್ರದ ಟ್ರೇಲರ್‌ನಲ್ಲಿ ಬಗೆಬಗೆ ವಿಭಿನ್ನ ಪ್ರಪಂಚಗಳನ್ನು ಕಾಣಬಹುದು. ಒಂದು ಕಾಶಿ, ಅದರ ಉಳಿವಿಗಾಗಿ ಹೋರಾಡುತ್ತಿರುವ, ಕೊನೆಯದಾಗಿ ಉಳಿದ ನಗರವೆಂದು ಬಿಂಬಿಸಲಾಗಿದೆ. ದೃಶ್ಯ ವೈಭವವೇ ಇಡೀ ಟ್ರೇಲರ್‌ನ ಜೀವಾಳ. ಊಹೆಗೂ ನಿಲುಕದ ಒಂದಷ್ಟು ಅಚ್ಚರಿಗೆ ದೂಡುವ ದೃಶ್ಯಗಳೇ ಇಲ್ಲಿನ ಹೈಲೈಟ್.‌ ಅತ್ಯುತ್ತಮ ಹಿನ್ನೆಲೆ ಸ್ಕೋರ್, ಹೈ ಕ್ಲಾಸ್ VFX ಮತ್ತು ರೋಮಾಂಚನಗೊಳಿಸುವ ದೃಶ್ಯಗಳೊಂದಿಗೆ, ಈ ಸಿನಿಮಾ ಮೂಡಿಬಂದಿದೆ. ತೆಲುಗು, ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ.  
ನಿರ್ದೇಶಕ ನಾಗ್ ಅಶ್ವಿನ್ ಅವರ ದೂರದೃಷ್ಟಿಯ ವಿಧಾನವು ಭಾರತೀಯ ಸಿನಿಮಾವನ್ನು ಅದರ ನೆಲದ ದೃಶ್ಯಗಳು ಮತ್ತು ಕಥೆ ಹೇಳುವ ಮೂಲಕ ಮರುವ್ಯಾಖ್ಯಾನಿಸುವ ಭರವಸೆ ನೀಡುತ್ತದೆ. ‘ಕಲ್ಕಿ 2898 AD’ ನಿಜವಾದ ಫ್ಯಾನ್ಸ್-ಇಂಡಿಯನ್ ಸಿನಿಮಾ ಎನಿಸಿಕೊಂಡಿದೆ. ತಾರಾಗಣದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ ಮತ್ತು ವೈಜಯಂತಿ ಮೂವೀಸ್ ಬಂಡವಾಳ ಹೂಡಿದೆ. ಈ ಬಹುಭಾಷಾ, ಪುರಾಣ- ಪ್ರೇರಿತ ವೈಜ್ಞಾನಿಕ ಕಥೆಯುಳ್ಳ ಸಿನಿಮಾ, ಜೂನ್ 27ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Post a comment

No Reviews