ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ದಿನನಿತ್ಯದ ಎಲ್ಲ ಪ್ರಕ್ರಿಯೆಗಳನ್ನು ಕನ್ನಡ ಭಾಷೆಯಲ್ಲಿ ನಡೆಸಲು ನಿರ್ದೇಶನ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಗುರುನಾಥ್ ವಡ್ಡೆ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ನಡೆಸಿತ್ತು ಎನ್ನಲಾಗಿದೆ.
ಸರ್ಕಾರದಲ್ಲಿ ಏಕ ಭಾಷೆ ಬಳಕೆ ಮಾಡಬೇಕೆಂಬ ಸಾರ್ವತ್ರಿಕವಾದ ಸೂತ್ರವಿಲ್ಲ. ಹೀಗಾಗಿ ಕನ್ನಡ ಭಾಷೆಯಿರುವಲ್ಲಿ ಆಂಗ್ಲಭಾಷೆ ಬಳಕೆ ಅಗತ್ಯವಿದ್ದರೆ ಅದಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಪೀಠ ಸ್ಪಷ್ಟ ಪಡಿಸಿದೆ.
ಸರ್ಕಾರಿ ವ್ಯವಹಾರಗಳಲ್ಲಿ ಯಾವ ಭಾಷೆ ಬಳಸಬೇಕೆಂಬ ನೀತಿ ಮತ್ತು ಅನುಕೂಲತೆಯ ವಿಷಯವಾಗಿದೆ. ಕನ್ನಡ ಭಾಷೆ ಸ್ಥಳೀಯ ಭಾಷೆಯಾಗಿದ್ದು, ಅದಕ್ಕೆ ಪ್ರಾಮುಖ್ಯತೆ ನೀಡಿ ಪ್ರೋತ್ಸಾಹಿಸಬೇಕಾಗಿದೆ. ಆದರೆ ಈ ಅಂಶಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪುರಸ್ಕರಿಸಲು ಅರ್ಹವಾಗುವುದಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿತು.
Post a comment
Log in to write reviews