2024-09-19 05:02:51

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದು ಕರಿಯ ರಿಲೀಸ್.!

ಖ್ಯಾತ ನಟ ದರ್ಶನ್ ಅವರು ಜೈಲು ಸೇರಿದ್ದು, ಈ ನಡುವಲ್ಲೇ ದರ್ಶನ್‌ ಅಭಿನಯದ ಕರಿಯ ಚಿತ್ರ ಇಂದು ರಾಜ್ಯದ ಚಿತ್ರಮಂದಿರಗಳಲ್ಲಿ ಮತ್ತೆ ಮರು ಬಿಡುಗಡೆಯಾಗಿದೆ.

2003ರ ಜನವರಿ ತಿಂಗಳಲ್ಲಿ ಕರಿಯ ಸಿನಿಮಾ ಮೊದಲ ಬಾರಿ ಬಿಡುಗಡೆ ಆಗಿತ್ತು. ಖ್ಯಾತ ನಿರ್ದೇಶಕ ಪ್ರೇಮ್ ಅವರ ಮೊದಲ ಸಿನಿಮಾ ಇದಾಗಿತ್ತು. ದರ್ಶನ್​ ಅವರಿಗೆ ನಾಯಕನಾಗಿ ಇದು ಐದನೇ ಸಿನಿಮಾ ಹಾಗೂ ಮೊದಲ ಬಲು ದೊಡ್ಡ ವಿಜಯ ತಂದುಕೊಟ್ಟ ಸಿನಿಮಾ ಆಗಿತ್ತು. ಆಗಿನ ಕಾಲಕ್ಕೆ ಈ ಸಿನಿಮಾ 700 ದಿನಗಳ ಪ್ರದರ್ಶನ ಕಂಡಿತ್ತು. ಮೆಜೆಸ್ಟಿಕ್ ಚಿತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ದರ್ಶನ್ ಅವರಿಗೆ ಕರಿಯ ರೌಡಿಸಂ ಸಿನಿಮಾಗಳ ಬ್ರ್ಯಾಂಡ್ ಅಂಬಾಸಿಡರ್ ಮಾಡಿಬಿಟ್ಟಿತ್ತು.

 

ಇಂದು ಕರಿಯ ಚಿತ್ರ ರೀ-ರಿಲೀಸ್ ಅದ ಬೆನ್ನಲೇ ನಿರ್ದೇಸಕ ಪ್ರೇಮ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ನಲ್ಲಿ ಬರೆದುಕೊಂಡಿದ್ದು, ಭಾರತೀಯ ಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು, ಕರಿಯ ಇದು ನಿಮ್ಮಿಂದ. ಅಭಿಮಾನಿಗಳು ಶಾಂತಿ, ತಾಳ್ಮೆ ಹಾಗೂ ಪ್ರೀತಿಯಿಂದ ಕರಿಯನನ್ನು ಹರಸಿ ಹಾರೈಸಿ. ಯಾವುದೇ ಅತಿರೇಕಗಳನ್ನು ಮಾಡಬೇಡಿ. ನಿಮ್ಮ ಆನ್‌ಲೈನ್‌ ಬರವಣಿಗೆಗಳು ಬೇರೆಯವರಿಗೆ ನೋವುತರದಿರಲಿ. ದರ್ಶನ್‌ ಅವರು ಕಾನೂನು ಮುಕ್ತರಾಗಿ ಆದಷ್ಟು ಬೇಗ ಹೊರಗೆ ಬಂದು ನಿಮ್ಮ, ನಮ್ಮ ಜೊತೆ ಬೆರೆಯಲಿ, ಬೆಳಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸೋಣ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

ಈ ಸಿನಿಮಾಮ ಮತ್ತೆ ಇಂದು ರೀ-ರಿಲೇಸ್ ಮರು ಬಿಡುಗಡೆ ಆಗುತ್ತಿದ್ದು, ಚಿತ್ರಮಂದಿರದಲ್ಲಿ ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿಳುತ್ತಿದ್ದಾರೆ.

ದರ್ಶನ್ ಜೈಲು ಸೇರಿದ ಬಳಿಕ ಬಿಡುಗಡೆ ಆಗುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಕೆಲ ವಾರದ ಹಿಂದೆ ದರ್ಶನ್ ನಟನೆಯ ‘ಶಾಸ್ತ್ರಿ’ ಸಿನಿಮಾ ಮರು ಬಿಡುಗಡೆ ಆಗಿತ್ತು. ಈ ಸಿನಿಮಾ ಉತ್ತಮ ಕಲೆಕ್ಷನ್ ಅನ್ನೇ ಮಾಡಿತ್ತು. ಇದೀಗ ‘ಕರಿಯ’ಸಿನಿಮಾ ಮರು ಬಿಡುಗಡೆ ಆಗುತ್ತಿದ್ದು, ಈ ಸಿನಿಮಾ ನಿರೀಕ್ಷೆಗೂ ಮೀರಿ ಉತ್ತಮ ಕಲೆಕ್ಷನ್ ಎನ್ನಲಾಗಿದೆ.

Post a comment

No Reviews