2024-12-24 05:42:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಂಗಾಂಗ ದಾನದಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ

ಬೆಂಗಳೂರು : ರಾಜ್ಯದಲ್ಲಿ ಅಂಗಾಂಗ ದಾನ (Organ Donation) ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ದಾನ ಪಡೆಯುವವರ ಸಂಖ್ಯೆ ಕೂಡ ಬೆಳೆಯುತ್ತಿದೆ. ಸದ್ಯ ಈಗ ಕರ್ನಾಟಕ ರಾಜ್ಯವು ಇಡೀ ದೇಶದಲ್ಲಿ ಅಂಗಾಂಗ ದಾನ ಮಾಡುವಲ್ಲಿ 2ನೇ ಸ್ಥಾನ ಪಡೆದಿದೆ.

2023ರಲ್ಲಿ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಅತ್ಯುತ್ತಮ ರಾಜ್ಯ ಎಂಬ ಹೆಗ್ಗಳಿಕೆ ಪಡೆದಿದ್ದು ಕೇಂದ್ರ ಸರ್ಕಾರ ಈ ಪ್ರಶಸ್ತಿಯನ್ನು ಘೋಷಿಸಿತ್ತು. ರಾಜ್ಯದಲ್ಲಿ 178 ಜನ ಅಂಗಾಂಗ ದಾನ ಮಾಡಿದ್ದಾರೆ. ಅಂಗಾಂಗ ದಾನ ಕಾರ್ಯಕ್ರಮದಲ್ಲಿ ಕರ್ನಾಟಕ ಗಮನಾರ್ಹ ಸಾಧನೆ ಮಾಡಿದೆ. ಕರ್ನಾಟಕದ  ಎಲ್ಲಾ ಜಿಲ್ಲೆಗಳಿಗೆ ಹೋಲಿಸಿದ್ದಾರೆ ಬಳ್ಳಾರಿ ಜಿಲ್ಲೆ ಅತಿ ಹೆಚ್ಚು ಅಂಗಾಂಗ ದಾನ ಮಾಡಿರುವ ಜಿಲ್ಲೆಯಾಗಿದೆ.

ರಾಜ್ಯದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಅಂಗಾಂಗ ದಾನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆದಿದೆ. ‘ಆಯುಷ್ಮಾನ್ ಭವ’ ಆರೋಗ್ಯ ಮೇಳದಲ್ಲಿ ಅಂಗಾಂಗ ದಾನದ ಪ್ರತಿಜ್ಞೆ ಪಡೆಯುವಲ್ಲಿ ಕರ್ನಾಟಕ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಅಂಗಾಂಗ ದಾನವನ್ನು ಮತ್ತಷ್ಟು ಪ್ರೋತ್ಸಾಹಿಸಲು ರಾಜ್ಯ ಸರ್ಕಾರ ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರನ್ನು ಗೌರವಿಸಲು ಆದೇಶ ಹೊರಡಿಸಿದೆ. ಜೊತೆಗೆ ಹೊಸ ನಿರ್ದೇಶನದ ಪ್ರಕಾರ, ಈ ವರ್ಷ ಜನವರಿ 26 ರಿಂದ ಆಗಸ್ಟ್ 14 ರವರೆಗೆ ಅಂಗಾಂಗ ದಾನ ಮಾಡಿದವರಿಗೆ ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವಿಸಲು ಸರ್ಕಾರ ಮುಂದಾಗಿದೆ. ಇನ್ನು ಸ್ವಯಂ ಪ್ರೇರಿತರಾಗಿ ಅಂಗಾಂಗ ದಾನ ಮಾಡಿದವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ.

Post a comment

No Reviews