
ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಸಂಜಯ್ ನಗರದ ನಿವಾಸದಲ್ಲಿ ಇಂದು ನಡೆದಿದೆ. ಮೃತ ಮಹಿಳೆಯನ್ನು ಚೈತ್ರಾಗೌಡ ಎಂದು ಗುರುತಿಸಲಾಗಿದೆ. ಈಕೆ ವೃತ್ತಿಯಲ್ಲಿ ವಕೀಲೆಯಾಗಿದ್ದು ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನೂ ಈ ಸಾವಿಗೆ ನಿಖರ ಕಾರಣ ಏನೆಂದು ತಿಳಿದುಬಂದಿಲ್ಲ. ಹಾಗೆಯೇ, ಮನೆಯಲ್ಲಿ ಯಾವುದೇ ಡೆತ್‌ನೋಟು ಕಂಡುಬಂದಿಲ್ಲ ಎಂದು ಹೇಳಲಾಗಿದೆ.
ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
Poll (Public Option)

Post a comment
Log in to write reviews