
ಬೆಂಗಳೂರು: ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಭಾನುವಾರ (ಆ.11) ಪರೀಕ್ಷೆ ನಡೆಸಲಿದೆ. ವೆಬ್ ಕಾಸ್ಟಿಂಗ್ ಮೂಲಕ ಕಟ್ಟುನಿಟ್ಟಿನ ನಿಗಾ ಇಡಲು ಸಕಲ ಸಿದ್ಧತೆ ಮಾಡಿಕೊಂಡಿದೆ.
ಬೆಂಗಳೂರು ಉತ್ತರ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲ್ಬುರ್ಗಿ ಮತ್ತು ಮೈಸೂರು ನಗರಗಳ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.
ಒಟ್ಟು 14,131 ಮಂದಿ ಅರ್ಜಿ ಸಲ್ಲಿಸಿದ್ದು ಅಷ್ಟೂ ಮಂದಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ವ್ಯವಸ್ಥೆ ಮೇಲೆ ನಿಗಾ ಇಡಲಾಗುತ್ತದೆ. ಯಾವುದೇ ಅಕ್ರಮಕ್ಕೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದರು.
Poll (Public Option)

Post a comment
Log in to write reviews