2024-09-19 04:50:30

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇಜ್ರಿವಾಲ್ ನ್ಯಾಯಾಂಗ ಬಂಧನ ಸೆಪ್ಟೆಂಬರ್ 2ರವರೆಗೆ ವಿಸ್ತರಣೆ

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಬಿಆರ್‌ಎಸ್ ನಾಯಕಿ ಕೆ. ಕವಿತಾ ಮತ್ತು ಇತರರ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಸೆಪ್ಟೆಂಬರ್ 2ರವರೆಗೆ ವಿಸ್ತರಿಸಿದೆ.

ಈ ಹಿಂದೆ ನೀಡಲಾಗಿದ್ದ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಬಂಧನವನ್ನು ವಿಸ್ತರಿಸಿದ್ದಾರೆ.

ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಈ ಪ್ರಕರಣದಲ್ಲಿ ಜಾಮೀನು ಬಾಂಡ್ ಸಲ್ಲಿಸದ ಕಾರಣ ಇಲ್ಲಿನ ತಿಹಾರ್ ಜೈಲಿನಲ್ಲಿ ಬಂಧಿಯಾಗಿದ್ದಾರೆ.

Post a comment

No Reviews