
ಮಂಗಳೂರು: ಕೇರಳದಲ್ಲಿ ನಿಫಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ.
ನಿಫಾ ವೈರಸ್ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಯಾಗಿದೆ.
ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಜನರು ದಕ್ಷಿಣ ಕನ್ನಡಕ್ಕೆ ಆಗಮಿಸುತ್ತಾರೆ. ಹೀಗೆ ಆಗಮಿಸಿದವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
Poll (Public Option)

Post a comment
Log in to write reviews