
ಚಿತ್ರದುರ್ಗ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ನಿನ್ನೆಯಷ್ಟೇ ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನಿನ ಮೇಲೆ ಹೊರ ಬಂದಿದ್ದು, ಇದರ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ನಿನ್ನೆ ನಟ ದರ್ಶನ್ಗೆ ಆರೋಗ್ಯ ಸಮಸ್ಯೆಯ ಕಾರಣದಿಂದ ಹೈಕೋರ್ಟ್ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಸುಪ್ರೀಂಕೋರ್ಟ್ಗೆ ಪೊಲೀಸರು ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರಂತೆ. ಮೇಲ್ಮನವಿ ಸಲ್ಲಿಸುವ ಕುರಿತಾಗಿ ಈಗಾಗಲೇ ಕಮಿಷನರ್ ಬಿ.ದಯಾನಂದ್ ಅವರ ಬಳಿ ಪೊಲೀಸರು ಒಂದು ಸುತ್ತಿನ ಸಭಯೆನ್ನೂ ಮಾಡಿದ್ದಾರೆಂದು ಎಂದು ತಿಳಿದು ಬಂದಿದೆ.
Poll (Public Option)

Post a comment
Log in to write reviews