
ಹೊಸಕೋಟೆ: ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದಕ್ಕೆ ಪ್ರಶ್ನೆ ಮಾಡಿದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಂದು ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ.
ಹೊಸಕೋಟೆ ತಾಲೂಕಿನ ಗಂಗಾಪುರ ಗ್ರಾಮದ ನಿವಾಸಿ ನವೀನ್ ನಾಯಕ್(27) ಕೊಲೆಯಾದ ಯುವಕ.
ಇಂದು ಬೆಳಗಿನ ಜಾವ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದನ್ನು ನವೀನ್ ನಾಯಕ್ ಪ್ರಶ್ನೆ ಮಾಡಿದ್ದ. ಇದೇ ವಿಚಾರಕ್ಕೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.
ನವೀನ್ ತರಕಾರಿ ವ್ಯಾಪಾರಕ್ಕೆ ಹೋಗುತ್ತಿದ್ದನು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಹೊಸಕೋಟೆ ಡಿವೈಎಸ್‌ಪಿ ಶಂಕರ್ ಗೌಡ ಅಣ್ಣ ಸಾಹೇಬ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓವರ್ ಟೆಕ್ ಮಾಡುವ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಹೇಳಿದ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಕೊಲೆಗಾರರನ್ನ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Poll (Public Option)

Post a comment
Log in to write reviews