2024-12-24 07:35:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೊಹ್ಲಿ ಕರೆಗೆ ಆರ್‌ಸಿಬಿಗೆ ಕೆ.ಎಲ್‌.ರಾಹುಲ್ ಎಂಟ್ರಿ?

ಬೆಂಗಳೂರು: ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ಮುಂದಿನ ವರ್ಷ ನಡೆಯಲಿರುವ 18ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2025) ಆರ್​ಸಿಬಿ(RCB) ಪರ ಆಡಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಕೇಳಿ ಬರುತ್ತಲೇ ಇದೆ. ಇದೀಗ ರಾಹುಲ್​ ಆರ್​ಸಿಬಿ ಸೇರುವ ಕುರಿತು ಮತ್ತೊಂದು ಬಿಗ್​ ಅಪ್ಡೇಟ್​ ಸಿಕ್ಕಿದೆ. ಹೌದು, ರಾಹುಲ್​ ಅವರನ್ನು ಆರ್​ಸಿಬಿಗೆ ಕರೆತರಲು ಅವರ ಗೆಳೆಯ ವಿರಾಟ್​ ಕೊಹ್ಲಿ(Virat Kohli) ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವರ್ಷ ನಡೆದಿದ್ದ ಐಪಿಎಲ್​ ವೇಳೆ ಆರ್.ಅಶ್ವಿನ್ ಜತೆಗಿನ ಕುಟ್ಟಿ ಸ್ಟೋರೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಕೆಎಲ್ ರಾಹುಲ್, 2013ರಲ್ಲಿ ವಿರಾಟ್ ಕೊಹ್ಲಿ ಅವರು ತನ್ನನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಂಡರು. ನಾನು ಬೆಂಗಳೂರು ತಂಡದಲ್ಲಿ ಆಡಲು ಇಷ್ಟಪಡುತ್ತೇನೆ. ನಾನು ಅಲ್ಲಿದಂದಲೇ ಈ ಪಯಣ ಆರಂಭಿಸಿದೆ. ಅಲ್ಲಿಯೇ ಇದನ್ನು ಅಂತ್ಯಗೊಳಿಸಲು ಬಯುಸುತ್ತೇನೆ. ಅದು ತನ್ನ ತಲೆಯಲ್ಲಿದೆ ಎಂದು ಹೇಳಿದ್ದರು. ಇದೀಗ ಕೊಹ್ಲಿ ಮತ್ತೆ ರಾಹುಲ್​ ಅವರನ್ನು ಆರ್​ಸಿಬಿ ತಂಡಕ್ಕೆ ಸೇರಿಸಿಕೊಳ್ಳಲು ಫ್ರಾಂಚೈಸಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಲಕ್ನೋ ತಂಡದ ಮಾಲಿಕ ಗೋಯೆಂಕಾ ತೋರಿದ್ದ ವರ್ತನೆನಿಂದ ಬೇಸರಗೊಂಡಿರುವ ರಾಹುಲ್ ಈ ಬಾರಿ ಲಕ್ನೋ ತೊರೆಯುವುದು ಬಹುತೇಕ ಖಚಿತವಾಗಿದೆ. ಈ ಬಾರಿ ಆರ್​ಸಿಬಿ ಕೇವಲ ಮೂರು ಆಟಗಾರರನ್ನು ಮಾತ್ರ ರೀಟೈನ್​ ಮಾಡಿಕೊಳ್ಳಲಿದೆ ಎನ್ನಲಾಗಿದೆ. ವಿರಾಟ್​ ಕೊಹ್ಲಿ, ಮೊಹಮ್ಮದ್​ ಸಿರಾಜ್​ ಮತ್ತು ವಿಲ್​ ಜಾಕ್ಸ್​ ಈ ಮೂವರು ಆಟಗಾರರು ಎನ್ನಲಾಗಿದೆ. ಕಳೆದ ಮೂರು ಸೀಸನ್​ನಲ್ಲಿ ಫಾಫ್​ ಡು ಪ್ಲೆಸಿಸ್ ಆರ್​ಸಿಬಿ ತಂಡವನ್ನು ಮುನ್ನಡೆಸಿದರೂ ತಂಡದ ಭವಿಷ್ಯ ಮಾತ್ರ ಬದಲಾಗಲಿಲ್ಲ. ಹೀಗಾಗಿ ಅವರನ್ನು ಈ ಬಾರಿ ತಂಡದಿಂದ ಕೈಬಿಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಟಿ20ಗೆ ನಿವೃತ್ತಿ ಹೇಳಿ ಎಲ್ಲ ಒತ್ತಡ ಕಡಿಮೆ ಮಾಡಿರುವ ಕೊಹ್ಲಿಯೇ ಮತ್ತೆ ಆರ್​ಸಿಬಿಗೆ ನಾಯಕನಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ. ವಿರಾಟ್​ ಕೊಹ್ಲಿ ಅವರು ಭಾರತ ತಂಡದ ಮೂರು ಮಾದರಿಯ ನಾಯಕತ್ವ ವಹಿಸಿಕೊಂಡಿದ್ದ ವೇಳೆ ಐಪಿಎಲ್​ನಲ್ಲಿಯೂ ತಂಡವನ್ನು ಮುನ್ನಡೆಸುವುದು ಕಷ್ಟವಾಗುತ್ತದೆ, ಕೆಲಸದ ಒತ್ತಡದಿಂದಾಗಿ ಆಟದ ಕಡೆ ಸರಿಯಾಗಿ ಗಮನ ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಐಪಿಎಲ್​ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. 

ವಿರಾಟ್​ ಕೊಹ್ಲಿ 2013ರಲ್ಲಿ ಆರ್​ಸಿಬಿಯ ಪೂರ್ಣ ಪ್ರಮಾಣದ ನಾಯಕನಾಗಿ ನೇಮಕಗೊಂಡಿದ್ದರು. 2021ರ ತನಕ ಅವರು ಆರ್​ಸಿಬಿಯನ್ನು ಮುನ್ನಡೆಸಿದ್ದರು. ಕೊಹ್ಲಿ ನಾಯಕತ್ವದಲ್ಲಿ ಒಟ್ಟು 140 ಪಂದ್ಯಗಳನ್ನು ಆಡಿದ್ದ ಆರ್​​ಸಿಬಿ 66 ಪಂದ್ಯಗಳನ್ನು ಜಯಿಸಿದೆ. 70 ಪಂದ್ಯಗಳಲ್ಲಿ ಸೋಲು ಕಂಡಿದೆ. ಐಪಿಎಲ್​ ಇತಿಹಾಸದಲ್ಲಿ ವಿನ್ನಿಂಗ್ಸ್​ ಸರಾಸರಿಯಲ್ಲಿ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಅವರ ನಾಯಕತ್ವದ ಸರಾಸರಿ ಗೆಲುವು ಶೇ. 46.15 ರಷ್ಟಿದೆ. ದಾಖಲೆ ಧೋನಿ ಹೆಸರಿನಲ್ಲಿದೆ. ಧೋನಿ ನಾಯಕತ್ವದ ಗೆಲುವಿನ ಸರಾಸರಿ 60.38 ರಷ್ಟಿದೆ.

Post a comment

No Reviews