
ಬೆಂಗಳೂರು : ನಂದಿನಿ ಹಾಲಿನ ದರ ಹೆಚ್ಚಿಸಲು ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಲಿನ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು. ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್‌ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ 1 ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ನಾಳೆಯಿಂದ ಈ ದರ ಅನ್ವಯವಾಗಲಿದೆ ಎಂದು ಭೀಮಾ ನಾಯ್ಕ್ ತಿಳಿಸಿದರು. ಈ ವೇಳೆ ಕೆಎಂಎಫ್ ಎಂಡಿ ಎಂ.ಕೆ.ಜಗದೀಶ್, ಆಡಳಿತ ಮಂಡಳಿ ಸದಸ್ಯರು ಭಾಗಿಯಾಗಿದ್ದರು.
Poll (Public Option)

Post a comment
Log in to write reviews