2024-12-24 06:10:23

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೊಡಗಿನಲ್ಲಿ ಭಾರಿ ಮಳೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್

ಕೊಡಗು: ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಿದ್ದು , ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ಕೆಲವೆಡೆ ಗುಡ್ಡ ಕುಸಿತ ಆಗಿ, ಅವಘಡಗಳು ಸಂಭವಿಸಿವೆ. ಈ ಹಿನ್ನಲೆ ಎಚ್ಚೆತ್ತ ಕೊಡಗು ಮುಂದಿನ ಎರಡು ದಿನಗಳ ಕಾಲ ಕೊಡಗು ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಣೆ ಮಾಡಿ, ಗುಡ್ಡ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ. ಇದರಿಂದ ಸಧ್ಯ ಕೊಡಗು ಜಿಲ್ಲೆಯ ಜನ ಆತಂಕದಲ್ಲಿದ್ದಾರೆ.

ಕಾವೇರಿ ಹಿನ್ನೀರಿನಲ್ಲಿ ಸಿಲುಕಿದ್ದ 6 ಜನರು & ಜಾನುವಾರು ರಕ್ಷಣೆ

ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮದಲ್ಲಿ ಭಾರೀ ಮಳೆಗೆ ಕಾವೇರಿ ಹಿನ್ನೀರಿನಲ್ಲಿ ಸಿಲುಕಿದ್ದ 6 ಜನರು ಸೇರಿದಂತೆ  ಜಾನುವಾರುಗಳನ್ನು ರಕ್ಷಣೆ ಮಾಡಲಾಗಿದೆ. ಹೌದು, ಮನೆಯಲ್ಲಿದ್ದ 6 ಜನರು, 2 ಜಾನುವಾರು ಮತ್ತು 2 ನಾಯಿಗಳನ್ನು ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಪ್ರವಾಹದಿಂದ ದ್ವೀಪದಂತಾಗಿದ್ದ ಗ್ರಾಮದಲ್ಲಿ ನಿವಾಸಿಗಳು ಸಿಲುಕಿದ್ದರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಅವರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

 

Post a comment

No Reviews