2024-09-19 04:53:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೃಷ್ಣಂ ಪ್ರಣಯ ಸಖಿ" ನೋಡಿ ದುಬೈ ಕನ್ನಡಿಗರು ಫಿದಾ     

ಗೋಲ್ಡನ್‌ ಸ್ಟಾರ್‌ ಗಣೇಶ್‌ ನಟಿಸಿರುವ  ಕೃಷ್ಣಂ ಪ್ರಣಯ ಸಖಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಇದರ ನಡುವೆ ವಿದೇಶದಲ್ಲಿ ಪ್ರದರ್ಶನಗೊಂಡ್ಡು ಅಲ್ಲಿನ ಕನ್ನಡಿಗರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ.

ದುಬೈ ಹಾಗು ಅಬುದಾಬಿಯಲ್ಲಿ  ಪ್ರದರ್ಶನಗೊಂಡಿದ್ದು, ಅಲ್ಲಿನ ಕನ್ನಡಿಗರು ಕೃಷ್ಣಂ ಪ್ರಣಯ ಸಖಿ ಚಿತ್ರಕ್ಕೆ ಮನ ಸೋತಿದ್ದಾರೆ

ಇತ್ತೀಚೆಗೆ ದುಬೈನಲ್ಲಿ ರಶ್ಮಿ ವೆಂಕಟೇಶ್, ಸೆಂದಿಲ್ ಮತ್ತು ತಂಡದವರು "ಕೃಷ್ಣಂ ಪ್ರಣಯ ಸಖಿ" ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದ್ದರು.  ಈ ವೇಳೆ ನಟ ಗೋಲ್ಡನ್ ಸ್ಟಾರ್ ಗಣೇಶ್, ನಾಯಕಿ ಮಾಳವಿಕ ನಾಯರ್, ನಟ ರಂಗಾಯಣ ರಘು, ನಿರ್ದೇಶಕ ಶ್ರೀನಿವಾಸರಾಜು, ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಸೇರಿದಂತೆ ಚಿತ್ರತಂಡದ ಸದಸ್ಯರು ಈ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ್ದರು.

ಸುಮಾರು 750ಕ್ಕೂ ಅಧಿಕ ಕನ್ನಡಿಗರು ಈ ಚಿತ್ರವನ್ನು ನೋಡಿ ಸಂಭ್ರಮಿಸಿದರು. ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು.ನಮ್ಮ ಚಿತ್ರಕ್ಕೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ ಎಂದು ನಾಯಕ ಗೋಲ್ಡನ್ ಸ್ಟಾರ್ ಗಣೇಶ್ ಈ ಸಂದರ್ಭದಲ್ಲಿ ತಿಳಿಸಿದರು.

Post a comment

No Reviews