
ರಾಜ್ಯದಲ್ಲಿ ಕೃತಿಕಾ ಮಳೆಯ ಅಬ್ಬರ ಮುಂದುವರಿದಿದ್ದು ಹಾವೇರಿಯ ಕುರುಬಗೊಂಡ ಗ್ರಾಮದಲ್ಲಿ ಸಿಡಿಲಿಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಧಾರವಾಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೇ 16ರಂದು ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಶಾಲೆಯ ಮೇಲೆ ಮರ ಬಿದ್ದು, ಅಪಾರ ಹಾನಿ ಸಂಭವಿಸಿದೆ.
ಮೃತ ಯುವಕ 20 ವರ್ಷದ ದಯಾನಂದ ಹನುಮಂತ ಪುಟ್ಟನಗೌಡ್ರ ಎಂದು ತಿಳಿದುಬಂದಿದೆ. ದಯಾನಂದ ಹೊಲಕ್ಕೆ ತೆರಳಿದ್ದಾಗ ಮಳೆಯಿಂದ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಈ ದುರ್ಘಟನೆ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅರಣ್ಯ ಇಲಾಖೆಯ ಆವರಣದಲ್ಲಿದ್ದ ಬೃಹದ್ದಾಕಾರದ ಮರವೊಂದು ಪಕ್ಕದಲ್ಲಿದ್ದ ವೈಟಿಎಸ್ಎಸ್ ಶಿಕ್ಷಣ ಸಂಸ್ಥೆಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕಟ್ಟಡದ ಮೇಲೆ ಬಿದ್ದ ಪರಿಣಾಮ ಅಪಾರ ಹಾನಿ ಸಂಭವಿಸಿದೆ. ರಜೆ ಇದ್ದುದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ.
Poll (Public Option)

Post a comment
Log in to write reviews