
ಮಂಗಳೂರು: ನಗರದ ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಹೀಗಾಗಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಕ್ತಾಯದವರೆಗೆ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ಹೊರಡಿಸಿದ್ದಾರೆ.
ಮಂಗಳೂರಿನ ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಭೂಕುಸಿತಗೊಂಡು ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ ಪವಾಡಸದೃಶ್ಯ ರೀತಿ ಪಾರಾಗಿದ್ದಾರೆ. ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ ಮೃತ ಕಾರ್ಮಿಕ. ಸತತ ಆರೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್ನನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ಪಟ್ಟಿತ್ತು. ಆದರೆ ರಾಡ್, ಮಣ್ಣು, ಹಲಗೆಯ ನಡುವೆ ಸಿಲುಕಿಕೊಂಡಿದ್ದರಿಂದ ಕಾರ್ಮಿಕ ಅಷ್ಟರಲ್ಲಿ ಉಸಿರು ಚೆಲ್ಲಿದ್ದಾರೆ.
Poll (Public Option)

Post a comment
Log in to write reviews