ಬೆಂಗಳೂರು: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಮಿಶ್ರಣ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ತಿರುಮಲ ತಿರುಪತಿ ದೇವಸ್ಥಾನ (ಆಡಳಿತ ಮಂಡಳಿ ಅಧಿಕಾರಿ ಜೆ. ಶ್ಯಾಮಲಾ ಅವರಿಂದ ಸರ್ಕಾರಕ್ಕೆ 40 ಪುಟಗಳ ವರದಿ ಸಲ್ಲಿಸಲಾಗಿದೆ.
YSRP ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಲಡ್ಡುಗಳ ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಲಾಗಿದೆ ಎಂಬ ವಿವಾದದ ಬೆನ್ನಲ್ಲೇ ಪ್ರಕರಣವನ್ನು ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅಲ್ಲದೇ ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಟಿಡಿಪಿ ಹೇಳಿಕೆ ನೀಡಿತ್ತು. ಇದೀಗ ಸರ್ಕಾರಕ್ಕೆ ಟಿಟಿಡಿ 40 ಪುಟಗಳ ವರದಿ ಸಲ್ಲಿಸಿದೆ. ತಿರುಮಲ ಮತ್ತು ತಿರುಚನೂರು ದೇಗುಲಗಳಲ್ಲಿ ಲಾಡು ಮತ್ತು ಇತರ ಪ್ರಸಾದಗಳನ್ನು ಸಿದ್ಧಪಡಿಸಲು ಆರು ತಿಂಗಳಿಗೊಮ್ಮೆ ಅಗ್‌ಮಾರ್ಕ್ ಗುರುತು ಹೊಂದಿರುವ ಹಸುವಿನ ತುಪ್ಪವನ್ನು ಇ-ಟೆಂಡರ್ ಮೂಲಕ ಖರೀದಿಸಲಾಗುತ್ತದೆ.
Post a comment
Log in to write reviews