
ಉಡುಪಿ: ಭಾರೀ ಮಳೆಯಿಂದ ಆಗುಂಬೆ ಘಾಟ್‌ನಲ್ಲಿ ಭೂಕುಸಿತದ ಭೀತಿ ಎದುರಾಗಿದ್ದ ಹಿನ್ನೆಲೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 115 ಮತ್ತು ಕರ್ನಾಟಕ ಮೋಟಾರು ವಾಹನ ಕಾಯ್ದೆ 1989ರ ಸೆಕ್ಷನ್ 221(ಎ)(2) ಅಡಿಯಲ್ಲಿ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ ಜಾರಿಯಲ್ಲಿರಲಿದೆ. ಆಗುಂಬೆ ಘಾಟ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎಯ ತೀರ್ಥಹಳ್ಳಿ-ಮಲ್ಪೆ ರಸ್ತೆಯಲ್ಲಿ ಲಘು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
Poll (Public Option)

Post a comment
Log in to write reviews