
ಭಾರಿ ಮಳೆಯಿಂದಾಗಿ ವಾಯವ್ಯ ಪಾಕಿಸ್ತಾನದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 9 ಮಕ್ಕಳು ಸೇರಿದಂತೆ ಒಂದೇ ಕುಟುಂಬದ 12 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವಶೇಷಗಳ ಅಡಿಯಿಂದ ಎಲ್ಲಾ 12 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಮಹಿಳೆಯರು, ಒಬ್ಬ ಪುರುಷ ಮತ್ತು 9 ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ದೇಶದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಪಾಕಿಸ್ತಾನದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Poll (Public Option)

Post a comment
Log in to write reviews