
ಸಕಲೇಶಪುರ: ರೈಲ್ವೆ ಹಳಿ ಮೇಲೆ ಮರಗಳ ಸಮೇತ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ.
ಶುಕ್ರವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ.
ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರಡಾಡುವ ಪರಿಸ್ಥಿತಿ ಎದುರಾಗಿದೆ.
Poll (Public Option)

Post a comment
Log in to write reviews