
ಮೈಸೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ನಾಯಕ ಸಮುದಾಯ ಪ್ರತಿಭಟನೆ ನಡೆಸಿದ್ದಾರೆ.
ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಹಾಗೂ ಡೆತ್ ನೋಟ್ ಸಂಬಂಧ ಸಚಿವ ರಾಜೀನಾಮೆ ನೀಡಬೇಕೆಂದು ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದರು. ಹೀಗಿದ್ದರೂ, ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ತನಿಖೆ ನಡೆಸಿ ಶಿಕ್ಷೆ ನೀಡುತ್ತೇವೆ ಎಂದು ಸಚಿವ ನಾಗೇಂದ್ರ ಅವರು ಹೇಳಿಕೆ ನೀಡಿದ್ದರು. ಇದಾದ ನಂತರ ಸಚಿವರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷರು ಉದ್ದೇಶ ಪೂರ್ವಕವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ಇದು ಖಂಡನೀಯ. ನಾಯಕ ಸಮುದಾಯದ ಸಚಿವರನ್ನು ಹತ್ತಿಕ್ಕುವ ಪ್ರಯತ್ನವನ್ನು ವಿಜಯೇಂದ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಾಯಕ ಸಮುದಾಯದ ಜನರು ಪ್ರತಿಭಟಿಸಿ ಶಾಸಕ ಸ್ಥಾನಕ್ಕೆ ವಿಜಯೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಬಯಲಿಗೆಳೆದು ಅಧಿಕಾರಿ ಚಂದ್ರಶೇಖರ್ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ವಿಪಕ್ಷ ಬಿಜೆಪಿ ನಾಯಕರು ಆಡಳಿತ ರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ಸಚಿವ ಬಿ ನಾಗೇಂದ್ರ ಅವರಿಗೆ ರಾಜೀನಾಮೆಗೆ ಒತ್ತಾಯಿಸಿತ್ತು.
Poll (Public Option)

Post a comment
Log in to write reviews