
ಕನ್ನಡದಲ್ಲಿ ಯಾವಾಗ ಸೀಸನ್ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 11 ಶೀಘ್ರದಲ್ಲಿಯೇ ಶುರು ಆಗೋದು ಗ್ಯಾರಂಟಿ ಆಗಿ ಸದ್ದಿಲ್ಲದೇ ಪ್ರೋಮೊ ಚಿತ್ರೀಕರಣ ಮಾಡಲಾಗಿದೆ. ಮತ್ತೊಮ್ಮೆ ಸುದೀಪ್ ವೀಕೆಂಡ್‌ನಲ್ಲಿ ಮನೆ ಮನೆಯ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ. ಆಗಸ್ಟ್ ಕೊನೆ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಗ್‌ಬಾಸ್ ಕನ್ನಡ-11 ಮೊದಲ ಪ್ರೋಮೊ ಬಿಡುಗಡೆ ಆಗಲಿದೆ ಎನ್ನಲಾಗಿದೆ.
ಈ ಮುಂಚೆ ಸೋಷಿಯಲ್ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗಿತ್ತು. ಈ ಬಾರಿ ಸುದೀಪ್ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿತ್ತು.ಆದರೆ ಈಗ ಪ್ರೋಮೊ ಶೂಟ್ ಫೋಟೊಗಳು ವೈರಲ್ ಆಗಿವೆ.
ಸುದೀಪ್ ಸ್ಟೈಲಿಶ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೋಮೊಗೆ ಸಂಬಂಧಿಸಿದಂತೆ ಒಂದಷ್ಟು ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.ಸೀಸನ್‌ನಿಂದ ಸೀಸನ್‌ಗೆ ಸುದೀಪ್ ಸಂಭಾವನೆ ಕೂಡ ಹೆಚ್ಚಾಗಿದೆ. ಇನ್ನು ಕಿಚ್ಚ ಬಹಳ ಇಷ್ಟಪಟ್ಟು ಶೋ ನಡೆಸಿಕೊಡುತ್ತಿದ್ದಾರೆ.
ಸೆಪ್ಟೆಂಬರ್ 27 ಅಥವಾ ಅಕ್ಟೋಬರ್ 5ರಂದು ಬಿಗ್‌ಬಾಸ್ ಕನ್ನಡ-11 ಆರಂಭವಾಗಲಿದೆ. ಯೂಟ್ಯೂಬರ್ ವರ್ಷಾ ಕಾವೇರಿ, ಕಿರುತೆರೆ ನಟ ವರುಣ್ ಆರಾಧ್ಯ, ತುಕಾಲಿ ಸಂತು ಪತ್ನಿ ಮಾನಸ, ನಟ ಸುನೀಲ್ ರಾವ್, ಮೋಕ್ಷಿತಾ ಪೈ, ದಿವ್ಯಾ ವಸಂತ ಹೀಗೆ ಹಲವರ ಹೆಸರುಗಳು ಈ ಬಾರಿ ದೊಡ್ಮನೆಗೆ ಹೋಗಲು ಕೇಳಿಬರುತ್ತಿದ್ದು, ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದು, ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.
Poll (Public Option)

Post a comment
Log in to write reviews