
ಗುಂಡ್ಲುಪೇಟೆ: ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಪರಮಾಪುರ ಗ್ರಾಮದ ಶಿವಲಿಂಗಪ್ಪ ಅವರಿಗೆ ಸೇರಿದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ. ಈ ವೇಳೆ ಕಬ್ಬು ಕಟಾವು ಮಾಡುತ್ತಿದ್ದ ಕಾರ್ಮಿಕ ಗಾಬರಿಗೊಂಡು ಅಲ್ಲಿಂದ ತೆರಳಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಚಿರತೆ ಸೆರೆಗೆ ಬೋನು ಅಳವಡಿಸಿ, ಚಿರತೆಯ ಚಲನವಲನ ವೀಕ್ಷಿಸುತ್ತಿದ್ದಾರೆ. ಈ ಪ್ರದೇಶದಲ್ಲಿ ಸುಳಿಯದಂತೆ ಗ್ರಾಮಸ್ಥರಿಗೆ ಇಲಾಖೆ ಎಚ್ಚರಿಕೆ ನೀಡಿದ್ದಾರೆ.
Poll (Public Option)

Post a comment
Log in to write reviews