
ಬೆಂಗಳೂರು: ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆ ಪಾಲಿಸಬೇಕು. ಇನ್ನೊಂದು ಧರ್ಮ ಪ್ರೀತಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ ಸಮಾಜ ಹಾಗೂ ಎಲ್ಲಾ ಧರ್ಮಗಳೂ ಏಳಿಗೆಯಾಗುತ್ತದೆ ಎಂದರು.
ಎಲ್ಲರಿಗೂ ಒಂದೇ ರೀತಿಯಲ್ಲಿ ರಕ್ಷಣೆ
ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರನ್ನು ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹಲವರು ಉಪಸ್ಥಿತರಿದ್ದರು.
Poll (Public Option)

Post a comment
Log in to write reviews