
ಮುಡಾ ಹಗರಣದ ಪ್ರಾಸಿಕ್ಯೂಷನ್ಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಸತ್ಯಕ್ಕೆ ಸಂದ ಜಯ. ಸತ್ಯಮೇವ ಜಯತೆ. ಸಿದ್ದರಾಮಯ್ಯ ಅವರು ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಬಿಜೆಪಿ ನಾಯಕರು ಒತ್ತಾಯಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್ ತೀರ್ಪು ಸ್ವಾಗತಾರ್ಹ ಸಿದ್ದರಾಮಯ್ಯ ಅವರು ಕೂಡಲೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗು ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು. ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸ್ವಾಗತಾರ್ಹ” ಎಂದು ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಾಕಿದೆ.
Poll (Public Option)

Post a comment
Log in to write reviews