
ಮೈಸೂರು: ಅಭಿವೃದ್ಧಿ ಮಾಡಲು ಎಲ್ಲರ ಸಹಕಾರ ಅತಿ ಅಗತ್ಯ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.
ಸಂಸದರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈಸೂರಿನ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯ. ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ, ಮಾಜಿ ಸಂಸದ ಪ್ರತಾಪ್ ಸಿಂಹರ ಸಹಕಾರ ಕೇಳುತ್ತೇನೆ. ಮುಂದಿನ ದಿನಗಳಲ್ಲಿ ಅವರನ್ನು ಭೇಟಿ ಮಾಡಿ ಅಭಿವೃದ್ಧಿ ಬಗ್ಗೆ ಚರ್ಚಿಸುತ್ತೇನೆ. ಮೈಸೂರು ಪ್ರವಾಸಿ ತಾಣವಾಗಿರುವ ಕಾರಣ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದರು.
ಮೈಸೂರು ಪಾರಂಪರಿಕ ಕಟ್ಟಡಗಳ ನಗರವಾಗಿದೆ. ಹಾಗಾಗಿ ದೇವರಾಜ, ಲ್ಯಾನ್ಸ್ ಡೌನ್ ಕಟ್ಟಡಗಳನ್ನ ನೆಲಸಮ ಮಾಡುವ ಅವಶ್ಯಕತೆ ಇಲ್ಲ. ಹಾಗೆಯೆ ಅದನ್ನ ಸಂರಕ್ಷಣೆ ಮಾಡುತ್ತೇವೆ. ಇದರ ಜೊತೆಗೆ ಮೈಸೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಕೈಗಾರಿಕೆಗಳ ಅಭಿವೃದ್ಧಿ ಮಾಡುತ್ತೇವೆ. ಕುವೆಂಪುನಗರದಲ್ಲಿ ಸಂಸದರ ಕಚೇರಿ ತೆರೆಯಲಾಗಿದ್ದು ಸಾರ್ವಜನಿಕರು ಕ್ಷೇತ್ರದಲ್ಲಿರುವ ಸಮಸ್ಯೆಗಳ ಕುರಿತು ಮಾತನಾಡಲು ಭೇಟಿ ಮಾಡಬಹುದು ಎಂದರು.
ಮೈಸೂರು ಕೊಡಗು ಕ್ಷೇತ್ರದ ಮತದಾರರಿಗೆ ಧನ್ಯವಾದ ತಿಳಿಸಿ ಅವರು, ನನಗೆ ಉತ್ತಮ ಬೆಂಬಲ ನೀಡಿದ್ದು ಜೊತೆಗೆ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಲು ಜನತೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.
Poll (Public Option)

Post a comment
Log in to write reviews