2024-09-19 04:48:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅರಮನೆ ಮುಂಭಾಗ ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸಲು ಡಿಸಿಗೆ ಪತ್ರ

ಮೈಸೂರು ಅರಮನೆ ಮುಂದೆ ಪಾರಿವಾಳಗಳಿಗೆ ಧಾನ್ಯ ಚೆಲ್ಲುವುದನ್ನು ನಿಷೇಧಿಸಬೇಕು. ಇದರಿಂದ ಅರಮನೆಯ ಸೌಂದರ್ಯ ಹಾಗೂ ಅಸ್ತಿತ್ವಕ್ಕೆ ಧಕ್ಕೆಯಾಗುತ್ತಿರುವುದನ್ನು ತಪ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು (ಕೌಟಿಲ್ಯರಘು) ಪತ್ರ ಬರೆದಿದ್ದಾರೆ.

ಅರಮನೆಯ ಅಂದಗೆಡುತ್ತಿದೆ, ಆವರಣ ಕಲುಷಿತವಾಗಿದೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ದ್ವಾರದ ಮುಂಭಾಗ ಕೆಲವರು ಪಾರಿವಾಳಗಳಿಗೆ ನಿತ್ಯ ಧಾನ್ಯಗಳನ್ನು ತಂದು ಸುರಿಯುತ್ತಿದ್ದಾರೆ. ನೂರಾರು ಸಂಖ್ಯೆಯಲ್ಲಿ ಹಾರಿ ಬರುವ ಪಾರಿವಾಳಗಳು ಅರಮನೆಯ ಅಂದಗೆಡಿಸುತ್ತಿವೆ.

ನಾಲ್ವಡಿಯವರ ತಂದೆ ಮಹಾರಾಜ ಹತ್ತನೇ ಚಾಮರಾಜೇಂದ್ರ ಒಡೆಯರ್ ಪ್ರತಿಮೆ ಹಾಗೂ ಅದರ ಆವರಣ ಸಂಪೂರ್ಣ ತ್ಯಾಜ್ಯಗಳಿಂದ ಕಲುಷಿತಗೊಂಡಿದೆ. ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ಚಾರಿತ್ರಿಕ ಕೊಡುಗೆಗಳನ್ನು ನೀಡಿದ ಅವರನ್ನು ನಿತ್ಯವೂ ಅಪಮಾನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Post a comment

No Reviews