
ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಗೆ ಕಿಡಿಗೇಡಿಗಳು ಈ ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶವನ್ನು ರವಾನಿಸಿದ್ದಾರೆ.
ಲಾಂಗ್ ಲೀವ್ ಪ್ಯಾಲೆಸ್ಟೈನ್ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ.
ಈ ವಿಚಾರವನ್ನು ಟರ್ಮಿನಲ್ ಉಸ್ತುವಾರಿ ಪ್ರತಾಪ್ ಅವರ ಗಮನಕ್ಕೆ ತಂದಿದ್ದಾರೆ. ನಂತರ ಸಿಎಎಸ್‌ಒ, ಐಬಿ, ಬಿಡಿಡಿಎಸ್ ಮತ್ತು ಬಾಂಬ್ ನಿಷ್ಕ್ರಿಯ ದಳಕ್ಕೆ ಮಾಹಿತಿ ರವಾನಿಸಿದ್ದು ವಾಯುಯಾನ ಭದ್ರತಾ ನಿಯಮದ ಪ್ರಕಾರ ಅಗತ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಈ ಕುರಿತು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews