2024-12-24 05:42:36

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಬಕಾರಿ ಕಚೇರಿಯಲ್ಲೇ ಅಕ್ರಮ ಗಾಂಜಾ ಪತ್ತೆ-ದಂಗಾದ ಲೋಕಾಯುಕ್ತರು..!

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತ ಬಿ.ವೀರಪ್ಪ ಅವರು ನಗರದ 62 ಅಬಕಾರಿ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ದಾಖಲೆ ಇಲ್ಲದ ಎರಡು ಲಕ್ಷ ರು. ನಗದು, ಆಕ್ರಮ ಗಾಂಜಾ ಮತ್ತು ಹಲವು ಮದ್ಯದ ಬಾಟಲುಗಳನ್ನು ಪತ್ತೆ ಮಾಡಿದ್ದಾರೆ.

ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲಕ್ಕೆ ಕಾರ್ಯಾಚರಣೆ ಕೈಗೊಳ್ಳಲಾಯಿತು. ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್, ಉಪಲೋಕಾಯುಕ್ತ ಬಿ.ವೀರಪ್ಪ ಅವರು ಯಶವಂತಪುರ, ಬ್ಯಾಟರಾಯನಪುರ ಅಬಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾಳಿ ನಡೆಸಲಾದ ಅಬಕಾರಿ ಕಚೇರಿಗಳ ಪೈಕಿ ಬಹುತೇಕ ಕಚೇರಿಗಳಲ್ಲಿ ಹಲವು ಲೋಪದೋಷಗಳು ಕಂಡು ಬಂದಿವೆ.

ಲೋಕಾಯುಕ್ತರು ಭೇಟಿ ನೀಡಿದ ಕಚೇರಿಯಲ್ಲಿ ಯಾವುದೇ ಸೀಲ್ ಹಾಕಿರದ ಸುಮಾರು ಅರ್ಧ ಕೇಜಿಯಷ್ಟು ಅನಧಿಕೃತ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ ಎರಡು ಲಕ್ಷ ರೂ ನಗದು ಪತ್ತೆಯಾಗಿದೆ. ಇದನ್ನು ಕಂಡ ಲೋಕಾಯುಕ್ತರೇ ದಂಗಾಗಿದ್ದು, ಸಮರ್ಪಕ ಸ್ಪಷ್ಟನೆ ನೀಡುವಂತೆ ಸೂಚನೆ ನೀಡಿದ್ದಾರೆ. ಒಂದು ವೇಳೆ ಸೂಕ್ತ ಸ್ಪಷ್ಟನೆ ನೀಡದಿದ್ದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಎನ್‌ಡಿಪಿಎಸ್‌ ಪ್ರಕರಣದಲ್ಲಿ ಅಬಕಾರಿ ಇಲಾಖೆಯವರಿಗೆ ಗಾಂಜಾ ಜಪ್ತಿ ಮಾಡಲು ಅವಕಾಶ ಇದೆ. ಜಪ್ತಿ ಮಾಡಿದ ಗಾಂಜಾವನ್ನು ಸೀಲ್ ಮಾಡಬೇಕು. ನ್ಯಾಯಾಲಯಕ್ಕೆ ಹಾಜರುಪಡಿಸಿರುವ ದಾಖಲೆಗಳು ಇರಬೇಕು ಸೇರಿದಂತೆ ಹಲವು ನಿಯಮಗಳಿವೆ. ಆದರೆ, ಅಧಿಕಾರಿಗಳು ನಿಯಮ ಉಲ್ಲಂಘಿಸಿ ಮಾದಕ ವಸ್ತುಗಳನ್ನು ಪ್ರತ್ಯೇಕವಾಗಿ ಇಡಲಾಗಿತ್ತು ಎಂದು ಹೇಳಲಾಗಿದೆ. ಅಬಕಾರಿ ಪರವಾನಗಿ ನವೀಕರಿಸುವುದು ಸೇರಿ ದಂತ ಇತರೆ ವಿಚಾರವಾಗಿ ನಡೆಯುತ್ತಿರುವ ಅಕ್ರಮಗಳ ಕುರಿತು ಅಬಕಾರಿ ಪರವಾನಗಿದಾರರು ಮತ್ತು  ಸಾರ್ವಜನಿಕರು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು. ಈ ಬಗ್ಗೆ ಲೋಕಾಯುಕ್ತರು ಗೌಪ್ಯ ತನಿಖೆ ನಡೆಸಿ ಮಾಹಿತಿ ಪಡೆದುಕೊಂಡಿದ್ದರು. ಈ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಳ್ಳಲಾಗಿದೆ.  ರಾಜ್ಯದಲ್ಲಿ ಅಬಕಾರಿ ಇಲಾಖೆಯ ಕಚೇರಿಗಳ ಲ್ಲಿನ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಖ ಲಾಗಿರುವ 132 ಪ್ರಕರಣಗಳು ವಿವಿಧ ಹಂತದಲ್ಲಿ ತನಿಖೆನಡೆಸಲಾಗುತ್ತಿದೆಎಂದು ಲೋಕಾಯುಕ್ತ ಸಂಸ್ಥೆ ಹೇಳಿದೆ.

 

Post a comment

No Reviews