ಕರ್ನಾಟಕ
ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್; 54 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳಿಂದ ರೇಡ್

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕರ್ನಾಟಕಾದ್ಯಂತ ದಾಳಿ ಮಾಡಿದ್ದು, 12 ಜನ ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ 100ಕ್ಕೂ ಹೆಚ್ಚು ಲೋಕಾ ಅಧಿಕಾರಿಗಳು ರೇಡ್ ಮಾಡಿ ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಲೋಕಾಯುಕ್ತ SP-1 ಶ್ರೀನಾಥ್ ಜೋಶಿ ನೇತೃತ್ವದಲ್ಲಿ ರೇಡ್ ಮಾಡಲಾಗಿದ್ದು, ಬೆಂಗಳೂರು ಲೋಕಾಯುಕ್ತ SP-2 ವಂಶಿಕೃಷ್ಟ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
Poll (Public Option)

Post a comment
Log in to write reviews