
ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬೆಂಗಳೂರು ನಗರವನ್ನು ಲೂಟಿ ಮಾಡಲಾಗುತ್ತಿದೆ ಎಂದು ಜೆಡಿಎಸ್ ಮಹಿಳಾ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಉಸ್ತುವಾರಿ ಸಚಿವರಾದ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇವಲ ಪ್ರಚಾರಕ್ಕೆ ಮಾತ್ರ ಬ್ರ್ಯಾಂಡ್ ಬೆಂಗಳೂರು ಎಂದು ಸರ್ಕಾರ ಹೇಳುತ್ತಿದೆ.ಆದರೆ, ಬೆಂಗಳೂರು ನಗರ ಮೂಲಗಳ ಪರಿಸ್ಥಿತಿ ಅತ್ಯಂತ ದಯನೀಯವಾಗಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು.ಜೆಡಿಎಸ್ ಪಕ್ಷದ ನಾಯಕಿಯರಾದ ಕನ್ಯಾಕುಮಾರಿ, ಮಂಗಳಾ ರಾಜು, ಕವಿತಾ ರಾಮಚಂದ್ರ, ಸುಜಾತಾ, ಶೀಲಾ ನಾಗರಾಜ್, ಸಾಕಮ್ಮ, ನಿರುಪಮಾ ಸೇರಿದಂತೆ ಮೊದಲಾದವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
Poll (Public Option)

Post a comment
Log in to write reviews