
ಕುರುಗೋಡು: ಪಟ್ಟಣದಿಂದ ಕಂಪ್ಲಿ ತಾಲೂಕಿಗೆ ತೆರಳುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿವೆ. ವಾಹನ ಸವಾರರು ಪ್ರತಿದಿನ ಪರದಾಡುವಂತಹ ಸ್ಥಿತಿ ತಲುಪಿದ್ದು, ರೋಗಿಗಳು ಗರ್ಭಿಣಿ ಸ್ತ್ರೀಯರು ಹಾಗೂ ನಿತ್ಯ ಸಂಚರಿಸುವ ಪ್ರಯಾಣಿಕರು, ವಾಹನ ಸವಾರರು ರೋಸಿ ಹೋಗಿದ್ದಾರೆ.
ರಸ್ತೆಯ ಮೇಲೆ ಮೋಣಕಾಲುದ್ದ ತಗ್ಗು ಗುಂಡಿಗಳು ನಿರ್ಮಾಣಗೊಂಡಿವೆ. ಡಾಂಬರುಕಿತ್ತು ಹೋಗಿ ವರ್ಷಗಳೇ ಕಳೆದಿವೆ. ಆದರೂ ಈ ರಸ್ತೆ ಸುಧಾರಣೆಯತ್ತ ಮಾತ್ರ ಏಕೆ ಗಮನ ಹರಿಸುತ್ತಿಲ್ಲ ಎಂಬುವುದು ವಾಹನ ಸವಾರರ ಪ್ರಶ್ನೆಯಾಗಿದೆ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಮೇಲೆ ಪ್ರಯಾಣಿಕರು ಹಿಡಿಶಾಪ ಹಾಕುತ್ತಲೇ ಸಂಚರಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಎಚ್ಚೆತ್ತು ರಸ್ತೆ ದುರಸ್ತಿಗೆ ಮುಂದಾಗಬೇಕು ಎನ್ನುವುದು ಸಾರ್ವಜನಿಕರ ಒತ್ತಾಸೆಯಾಗಿದೆ.
Poll (Public Option)

Post a comment
Log in to write reviews