
ಬೆಂಗಳೂರು : ಎಲ್‌ಪಿಜಿ ಸಿಲಿಂಡರ್ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಬೆಲೆಯನ್ನು ಕಡಿಮೆ ಮಾಡಿದೆ.
ಜುಲೈ ತಿಂಗಳ ಆರಂಭದಲ್ಲೇ ಇಂಡಿಯನ್ ಆಯಿಲ್ ಕಾರ್ಪೊರೇಷನ್ 19 ಕೆಜಿಯ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 31ರೂ. ಇಳಿಕೆ ಮಾಡಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೆ ಬದಲಾವಣೆಯಾಗಿಲ್ಲ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಸಿದ್ದರಿಂದ ಹೋಟೆಲ್ ಉದ್ಯಮಿಗಳಿಗೆ ಅನುಕೂಲವಾಗಿದೆ. ಆದರೆ, ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಬೆಲೆ ಇಳಿಕೆ ನಂತರ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ 19 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿ ಇದೆ. ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 1,598 ಮತ್ತು 1,809.5 ರೂ. ಗೆ ಇಳಿದಿದೆ. ಎರಡೂ ನಗರಗಳಲ್ಲಿ 31 ರೂ. ಇಳಿಕೆಯಾಗಿದೆ.
Poll (Public Option)

Post a comment
Log in to write reviews