2024-09-19 04:49:54

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಡೆನೂರ್ ಮನು ನಟನೆಯ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್

ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದೆ. ಟೀಸರ್​​ನಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್​ನಲ್ಲಿ ಆರಂಭವಾಗಲಿದೆ.
ಈ ಚಿತ್ರವನ್ನು ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಸಕಲೇಶ ಪುರ, ಹಾಸನ, ರಾಮನಗರ, ಬೆಂಗಳೂರು ಮುಂತಾದ ಕಡೆ ನಡೆಯಲಿದೆ.
ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡುತ್ತಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಸಂಗೀತ ನೀಡುತ್ತಿದ್ದಾರೆ.
ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ತಾರಾಬಳಗದಲ್ಲಿ ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ದಿಗಂತ್, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ ಮುಂತಾದವರು ನಟಿಸಿದ್ದಾರೆ.

Post a comment

No Reviews