2024-12-24 07:25:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಧುರೈ- ಬೆಂಗಳೂರು ವಂದೇ ಭಾರತ್ ಸಂಚಾರ ಆರಂಭ 

ಬೆಂಗಳೂರು: ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ಯಿಂದ ಬೆಂಗಳೂರಿಗೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.
ಸೋಮವಾರ ಬೆಳಗ್ಗೆ 5.15ಕ್ಕೆ ಮಧುರೈ ನಿಲ್ದಾಣದಿಂದ ಹೊರಟು ಬೆಂಗಳೂರನ್ನು ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿ ಪುನಃ ತೆರಳಿತು. ಎರಡು ನಗರಗಳನ್ನು ಸರಿಸುಮಾರು 6 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ.
ರೈಲಿನ ವೇಗ, ನಿಲುಗಡೆ ನಿಲ್ದಾಣ ನಿಗದಿ ಬಳಿಕ ರೈಲಿನ ವೇಳಾಪಟ್ಟಿ, ದರವನ್ನು ಪ್ರಕಟಿಸಿ, ವಾಣಿಜ್ಯ ಸಂಚಾರದ ದಿನಾಂಕ ಘೋಷಣೆ ಮಾಡಲಾಗುತ್ತದೆ. ಪ್ರಾಥಮಿಕ ಮಾಹಿತಿಯಂತೆ ಈ ವಂದೇ ಭಾರತ್ ರೈಲು ದಿಂಡಿಗಲ್‌, ಕರೂರ್‌, ಸೇಲಂ, ಧರ್ಮಪುರಿ ಮತ್ತು ಹೊಸೂರು ನಿಲ್ದಾಣದಲ್ಲಿ ನಿಲುಗಡೆ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

Post a comment

No Reviews