
ಬೆಂಗಳೂರು: ಇಡೀ ಸಿಲಿಕಾನ್ ಸಿಟಿ ಜನತೆಯನ್ನು ಬೆಚ್ಚಿಬೀಳಿಸಿದ ಮಹಾಲಕ್ಷ್ಮಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ವೈಯಾಲಿಕಾವಲ್ ಪೊಲೀಸರು ಮಾಡುತ್ತಿದ್ದು, ಈಗಾಗಲೇ ಶಂಕಿತರನ್ನು ಕರೆತಂದು ವಿಚಾರಣೆ ಮಾಡುತ್ತಿದ್ದಾರೆ.
ಇನ್ನೂ ಮಹಾಲಕ್ಷ್ಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಈಗಾಗಲೇ ಒಂದಿಷ್ಟು ಮಾಹಿತಿ ಸಂಗ್ರಹ ಮಾಡಿದ್ದೇವೆ ಆದರೆ ಹೊರಗೆ ಹೇಳಲು ಸಾದ್ಯವಿಲ್ಲ . ವೈಯಾಲಿಕಾವಲ್ ಮಹಾಲಕ್ಷ್ಮಿ ಭೀಕರ ಹತ್ಯೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಿದೆ. ಈಗಾಗಲೇ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳಿವು ಸಂಗ್ರಹಿಸಿದ್ದಾರೆ. ಒಬ್ಬ ವ್ಯಕ್ತಿ ಇದರಲ್ಲಿ ಭಾಗಿಯಾಗಿದ್ದಾನೆ ಅಂತ ಹೇಳಲಾಗಿದೆ. ಆದರೆ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾನು ಹೊರಗಡೆ ಹೇಳೋದಕ್ಕೆ ಆಗಲ್ಲ.. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.
Poll (Public Option)

Post a comment
Log in to write reviews