
ಮಹಾರಾಷ್ಟ್ರ ಸರ್ಕಾರ ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಕುರಿತಾದ ಅಧಿಕೃತ ಆದೇಶದಲ್ಲಿ ಹೊರಡಿಸಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರವು, ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ.
ಭಾರತದಾದ್ಯಂತ ಕಂಡುಬರುವ ವಿವಿಧ ತಳಿಯ ಹಸುಗಳನ್ನು ಎತ್ತಿ ತೋರಿಸುತ್ತಾ, ಮಹಾರಾಷ್ಟ್ರ ಸರ್ಕಾರವು ಸ್ಥಳೀಯ ಹಸುಗಳ ಸಂಖ್ಯೆಯಲ್ಲಿನ ಇಳಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿತು. ತನ್ನ ಅಧಿಕೃತ ಆದೇಶದಲ್ಲಿ ಮಹಾರಾಷ್ಟ್ರ ಸರ್ಕಾರವು ಕೃಷಿಯಲ್ಲಿ ಹಸುವಿನ ಸಗಣಿ ಬಳಕೆಯನ್ನು ಒತ್ತಿಹೇಳಿತು. ಅದರ ಮೂಲಕ ಮನುಷ್ಯನಿಗೆ ಮುಖ್ಯ ಆಹಾರದಲ್ಲಿ ಪೋಷಣೆ ಸಿಗುತ್ತದೆ. ಇನ್ನು ಭಾರತದಲ್ಲಿ ಗೋವಿಗೆ ತಾಯಿಯ ಸ್ಥಾನಮಾನವನ್ನು ನೀಡಲಾಗಿದೆ ಮತ್ತು ಹಿಂದೂ ಧರ್ಮದಲ್ಲಿ ಗೋವನ್ನು ಪೂಜಿಸಲಾಗುತ್ತದೆ. ಇದಲ್ಲದೆ, ಹಸುವಿನ ಹಾಲು, ಮೂತ್ರ ಮತ್ತು ಸಗಣಿಗಳನ್ನು ಪವಿತ್ರವೆಂದು ಪರಿಗಣಿಸಲಾಗುತ್ತದೆ.
Poll (Public Option)

Post a comment
Log in to write reviews