ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಾಳೆ(ಸೆ.29) ಮಹಿಷ ಮಂಡಲೋತ್ಸವ(Mahisha Mandalotsava) ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಚಾಮುಂಡಿ ಬೆಟ್ಟಕ್ಕೆ (Chamundi Hill) ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮಧ್ಯಾಹ್ನದವರೆಗೂ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿರುವುದಿಲ್ಲ. ದಸರಾ ಹಿನ್ನೆಲೆಯಲ್ಲಿ ಸದ್ಯ ಬೆಟ್ಟದ ಮಹಿಷಾಸುರ ಪ್ರತಿಮೆಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಬಣ್ಣ ಒಣಗುವ ತನಕ ಪ್ರತಿಮೆಗೆ ಧೂಳು ಅಂಟದಂತೆ ಬಟ್ಟೆ ಹೊದಿಕೆ ಮಾಡಲಾಗಿದೆ.
ಇನ್ನು ನಗರದಲ್ಲಿ ಮಹಿಷಾ ದಸರಾ ಆಚರಣೆ ಮಡಿಕೊಳ್ಳಲು ಸಮಿತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಮಹಿಷನಿಗೆ ಪುಷ್ಪಾರ್ಚನೆ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ, ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಚನೆ?! ಬನ್ನಿ, ನೋಡೇ ಬಿಡೋಣ ಎಂದು ಸವಾಲು ಹಾಕಿದ್ದಾರೆ. ಇತ್ತ ಮಹಿಷ ಮಂಡಲೋತ್ಸವ ಆಚರಣೆ ಯಾರು ಬೇಕಾದರೂ, ಯಾವ ತೊಂದರೆಯಾಗದಂತೆ ಅವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು. ಆದರೆ, ಕಾನೂನು ಸುವ್ಯವಸ್ಥೆಗೆ ದಕ್ಕೆ ಆಗಬಾರದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಹೇಳುವ ಮೂಲಕ ಮಹಿಷ ದಸರಾ ಆಚರಣೆಗೆ ಪರೋಕ್ಷವಾಗಿ ಒಪ್ಪಿಗೆ ಸೂಚಿಸಿದ್ದಾರೆ. ಈ ಮಧ್ಯೆ ಮಹಿಷನಿಗೆ ಪುಷ್ಪಾರ್ಚನೆ ಮಾಡಲು ಅವಕಾಶ ಸಿಗುತ್ತಾ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
Post a comment
Log in to write reviews