ಸಿಎಂ ಹುದ್ದೆಗೆ ಯಾವುದೇ ಕುತ್ತು ಬಾರದಂತೆ ನೋಡಿಕೊಳ್ಳಿ: ಸಿಎಂ, ಡಿಸಿಎಂ ಹೈಕಮಾಂಡ್‌ಗೆ ಮನವಿ
ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲವನ್ನೇ ಸೃಷ್ಟಿಸಿದ್ದು, ನಿನ್ನೆ ದಿನ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಸಿಎಂ, ಡಿಸಿಎಂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ವಿವರಿಸಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ರಾಜ್ಯಪಾಲರ ಆಡಳಿತವನ್ನು ದುರುಪಯೋಗ ಮಾಡಿಕೊಂಡು ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ನಡೆಸಿದೆ. ಸಿಎಂ ಹುದ್ದೆಗೆ ಯಾವುದೇ ಕುತ್ತು ಬಾರದಂತೆ ನಮ್ಮ ಸಹಾಯಕ್ಕೆ ನೀವು ಇರಬೇಕು ಎಂದು ಸಿಎಂ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಭೇಟಿ ಬಳಿಕ ರಾಹುಲ್ ಗಾಂಧಿ ಸೈಲೆಂಟ್ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಬಿಜೆಪಿ ಮುಡಾ ಹಗರಣವನ್ನು ದೊಡ್ಡದು ಮಾಡಲು ಕಾಯುತ್ತಿದೆ. ನಾವೀಗ ಇದಕ್ಕೆ ಪ್ರತಿಕ್ರಿಯೆ ನೀಡಿದರೆ ಅದನ್ನೇ ಬಿಜೆಪಿ ಅಸ್ತ್ರವನ್ನಾಗಿ ಮಾಡಿಕೊಂಡು ಈ ವಿಚಾರವನ್ನು ದೊಡ್ಡದು ಮಾಡಲಿದೆ. ಹೀಗಾಗಿ ಕರ್ನಾಟಕದ ವಿಚಾರ ರಾಜ್ಯದಲ್ಲೇ ಹೋರಾಟ ಮಾಡಿ ರಾಜಕೀಯವಾಗಿ ಎದುರಿಸಿ ಎಂದು ಸಿಎಂಗೆ ರಾಹುಲ್ ಅಭಯ ನೀಡಿದ್ದಾರೆ. ಅಲ್ಲದೆ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಇದೀಗ ಹರಿಯಾಣ, ಜಮ್ಮು ಚುನಾವಣೆ ಫೋಷಣೆಯಾಗಿದ್ದು ಬಿಜೆಪಿ ರಾಜಕೀಯ ದಾಳಿಗೆ ಬಗ್ಗುವುದು ಬೇಡ ಎಂದು ಸೂಚಿಸಿದ್ದಾರೆ. ಹರಿಯಾಣ, ಜಮ್ಮು ಕಾಶ್ಮೀ ರ ಚುನಾವಣೆಯ ನಂತರ ಮಹಾರಾಷ್ಟ್ರದಲ್ಲೂ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದರೆ ಬಿಜೆಪಿ ಅದನ್ನು ಅಸ್ತ್ರವನ್ನಾಗಿ ಮಾಡುವ ಸಾಧ್ಯತೆ ಇರುವುದರಿಂದ ರಾಹುಲ್ ಗಾಂಧಿ ಎಚ್ಚರಿಕೆ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ.
Post a comment
Log in to write reviews