ಮಂಗಳೂರು:ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿರುವುದು ದಕ್ಷಿಣಕನ್ನಡ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದೊಂದಿಗೆ ಗಡಿಯನ್ನು ಹಂಚಿಕೊಂಡಿರುವ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿರುವ ಬೆನ್ನಲ್ಲೇ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹೈ ಅಲರ್ಟ್ ಘೋಷಿಸಿದೆ.
ಶಂಕಿತ ಪ್ರಕರಣಗಳಿಗೆ ಚಿಕಿತ್ಸೆ ನೀಡಲು ವೆನ್ಲಾಕ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳು ತಿಳಿಸಿದ್ದು, ಸ್ಕ್ರೀನಿಂಗ್ ವೇಳೆ ಯಾವುದೇ ಪ್ರಯಾಣಿಕರಲ್ಲಿ ಪಾಸಿಟಿವ್ ಕಂಡುಬಂದರೆ, ಚಿಕಿತ್ಸೆಗಾಗಿ ತಕ್ಷಣವೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ನಾಗರಿಕರು ಜಾಗರೂಕರಾಗಿರಬೇಕು ಮತ್ತು ರೋಗಲಕ್ಷಣಗಳ ಅನುಮಾನ ಕಂಡುಬಂದರೆ ತಕ್ಷಣವೇ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
Post a comment
Log in to write reviews