
ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ 30 ದಿನಗಳಲ್ಲಿ 1.76 ಕೋಟಿ ರೂ. ಸಂಗ್ರಹವಾಗಿದೆ.
ಈ ಕುರಿತು ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಮಾತನಾಡಿ, "ಭೀಮನ ಅಮವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಹರಕೆಯ ರೂಪದಲ್ಲಿ 1,76,29,849 ನಗದು, 45 ಗ್ರಾಂ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಹುಂಡಿಗೆ ಹಾಕಿದ್ದಾರೆ" ಎಂದಿದ್ದಾರೆ.
"ಇದಲ್ಲದೆ ಇ-ಹುಂಡಿಯಿಂದ 2,96,469 ಯುಎಸ್ಎ 20 ಡಾಲರ್, ಥೈಲ್ಯಾಂಡ್ 1 , ಶ್ರೀಲಂಕಾ 2, ಅರಬ್ 3 ನೋಟುಗಳು ಸೇರಿದಂತೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 11 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ" ಎಂದು ತಿಳಿಸಿದ್ದಾರೆ.
Poll (Public Option)

Post a comment
Log in to write reviews