
ಜಮ್ಮು & ಕಾಶ್ಮೀರ: ಚುನಾವಣಾ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಸ್ವಸ್ಥರಾಗಿದ್ದಾರೆ. ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರನೇ ಮತ್ತು ಕೊನೆಯ ಹಂತದ ಚುನಾವಣೆಯ ಕಾವು ಜೋರಾಗಿದ್ದು ಪ್ರಚಾರಕ್ಕೆ ಇಂದೇ ಕೊನೆಯದಿನವಾಗಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಸ್ಪರ್ಧಿಸುತ್ತಿದೆ. ಕಥುವಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಖರ್ಗೆ ಅಸ್ವಸ್ಥರಾದರು, ನನಗೆ 83 ವರ್ಷ, ನಾನು ಇಷ್ಟು ಬೇಗ ಸಾಯುವುದಿಲ್ಲ, ಪ್ರಧಾನಿ ಮೋದಿಯನ್ನು ಅಧಿಕಾರದಿಂದ ತೆಗೆದುಹಾಕುವವರೆಗೂ ನಾನು ಬದುಕುತ್ತೇನೆ ಎಂದು ಹೇಳುತ್ತಾ ಕುಸಿದುಬಿದ್ದಿದ್ದಾರೆ.
Poll (Public Option)

Post a comment
Log in to write reviews