
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಭಾನುವಾರ ಸಂಜೆ ಆರಂಭಗೊಂಡು, ಸೋಮವಾರ ಮುಂಜಾನೆಯವರೆಗೆ ವೈಭವದಿಂದ ನೆರವೇರಿತು.
ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಭವ್ಯ ಶೋಭಾ ಯಾತ್ರೆಯನ್ನು ಮಳೆಯ ನಡುವೆಯೂ ಸಹಸ್ರಾರು ಜನರು ಕಣ್ತುಂಬಿಕೊಂಡರು.
ಕುದ್ರೋಳಿಯಿಂದ ಹೊರಟ ದಸರಾ ಶೋಭಾಯಾತ್ರೆ ಶ್ರೀ ಕ್ಷೇತ್ರದಿಂದ ಹೊರಟು ಮಣ್ಣಗುಡ್ಡ ಮಾರ್ಗವಾಗಿ, ನಾರಾಯಣ ಗುರು ವೃತ್ತ -ಲಾಲ್ಬಾಗ್, ಬಲ್ಲಾಳ್ಬಾಗ್, ಪಿವಿಎಸ್ ವೃತ್ತ, ನವಭಾರತ್ ಸರ್ಕಲ್, ಕೆ.ಎಸ್. ರಾವ್ ರಸ್ತೆ, ಹಂಪನಕಟ್ಟೆ ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ “ಕಾರ್ಸ್ಟ್ರೀಟ್, ಚಿತ್ರಾ ಟಾಕೀಸು, ಅಳಕೆ ಮಾರ್ಗ ವಾಗಿ ಶ್ರೀ ಕ್ಷೇತ್ರ ಕುದ್ರೋಳಿಗೆ ಮರಳಿ. ಇಂದು ಮುಂಜಾನೆ, ಪೂಜೆ ಬಲಿ, ಪ್ರಾತಃಕಾಲ ಮಂಟಪ ಪೂಜೆ ಬಳಿಕ ದೇವಳದ ಪುಷ್ಕರಣಿಯಲ್ಲಿ ಶಾರದಾ ವಿಸರ್ಜನೆ ನಡೆಯಿತು.
Poll (Public Option)

Post a comment
Log in to write reviews